ಬೆಂಗಳೂರು: ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು.
ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಲೋಕಭವನಕ್ಕೆ ಸಿದ್ದರಾಮಯ್ಯ ತೆರಳಿದರು. ಸಚಿವ ಬಿ.ಎಸ್. ಸುರೇಶ್ ಅವರು ಕಾರು ಚಲಾಯಿಸಿಕೊಂಡು ಹೋದರು.
ಸಿದ್ದರಾಮಯ್ಯ ಅವರಿಗೆ ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಡಾ.ಹೆಚ್.ಸಿ.ಮಹದೇವಪ್ಪ, ಎಂ.ಬಿ
.ಪಾಟೀಲ್, ಕೆ.ಜೆ.ಜಾರ್ಜ್ ಸೇರಿದಂತೆ ಸಚಿವರು, ಶಾಸಕರು ಸಾಥ್ ನೀಡಿದರು.
ರಾಜ್ಯಪಾಲರ ಅನುಪಸ್ಥಿತಿಯಲ್ಲಿ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.
