ಸಮಗ್ರ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದು, ಲೋಕಭವನದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ.

ಇದೇ ವೇಳೆ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನು ಎರಡು-ಮೂರು ದಿನಗಳ ಕಾಲ ಸಿದ್ದರಾಮಯ್ಯ ಅವರು, ಹಂಗಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿನ್ನೆ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ನೀಡಿದ್ದರು.


Share

You cannot copy content of this page