ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಾಳೆ ಸಂಜೆ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನಪರಿಷತ್ತಿನಲ್ಲಿ ಸಭಾ ನಾಯಕರಾದ ಎನ್.ಎಸ್.ಬೋಸರಾಜು ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರದ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
