ರಾಜಕೀಯ

ಡಿಸೆಂಬರ್ 8 ರ ಸರ್ವಪಕ್ಷ‌ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

Share

ದೆಹಲಿ: ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ವಿರೋಧ ಪಕ್ಷದ ನಾಯಕರು, ಕೇಂದ್ರ ಸಚಿವರು, ರಾಜ್ಯದ ಸಂಸದರ ಬಳಿ ಮಾತನಾಡಿ ಸೂಕ್ತ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸೋಮಣ್ಣ ಅವರಿಗೆ ಪರಿಶೀಲನಾ ಸಭೆ ಇರುವ ಕಾರಣಕ್ಕೆ ಭಾಗವಹಿಸಲು ಆಗುತ್ತಿಲ್ಲ. ನಿರ್ಮಲಾ ಸೀತರಾಮನ್ ಅವರಿಗೆ ಸಂಸತ್ ನಲ್ಲಿ ಬಿಲ್ ಮಂಡನೆ ಮಾಡಬೇಕಾದ ಕಾರಣಕ್ಕೆ ಭಾಗವಹಿಸಲು ಆಗುತ್ತಿಲ್ಲ. ನಾನು ಪ್ರಹ್ಲಾದ್ ಜೋಶಿ ಅವರ ಬಳಿ ಮಾತನಾಡಿದೆ. ಆಗ ಅವರು ಪ್ರಧಾನಿಯವರು ಭಾಗವಹಿಸುವ ಕಾರಣಕ್ಕೆ ಆಗುವುದಿಲ್ಲ ಎಂದಿದ್ದಾರೆ ಎಂದರು.

ವಿರೋಧ‌ ಪಕ್ಷದ ನಾಯಕರು, ಸಂಸದರು, ಕೇಂದ್ರ ಸಚಿವರುಗಳ ಸಭೆಯನ್ನು ಒಟ್ಟಿಗೆ ಮಾಡಬೇಕು. ಏಕೆಂದರೆ ರಾಜ್ಯದ ಹಿತಕ್ಕೆ ಒಂದು ದನಿಯಾಗಿ ಹೋರಾಟ ಮಾಡಬೇಕು, ಅದಕ್ಕಾಗಿ ಈ ತಯಾರಿ ಎಂದು ಹೇಳಿದರು.

ಮುಂದಿನ ಸಭೆಯಲ್ಲಿ ನಮ್ಮ ಸಂಸದರು ಕೈಗೆತ್ತಿಕೊಳ್ಳಬೇಕಾದ ವಿಚಾರಗಳ ಬಗ್ಗೆ ತಿಳಿಸಲಾಗುವುದು. ಯಾರು ನೇತೃತ್ವ ವಹಿಸಬೇಕು ಎಂಬುದು ಮುಖ್ಯ ಎಂದರು.

ಸಿದ್ದರಾಮಯ್ಯ ಅವರು ತೊಟ್ಟಿದ್ದ ವಾಚ್ ನ‌ ಬೆಲೆ 43‌ ಲಕ್ಷ ‌ಎಂದು ವಿರೋಧ ಪಕ್ಷದವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಆ ವಾಚಿನ ಬೆಲೆ 43 ಲಕ್ಷ ಎಂದು ಯಾರು ಹೇಳಿದ್ದು, ನಾನು 7-8 ವರ್ಷದ ಹಿಂದೆ ತೆಗೆದುಕೊಂಡಾಗ 24 ಲಕ್ಷದಷ್ಟಿತ್ತು. ಅದು ಹೇಗೆ 43 ಲಕ್ಷವಾಗುತ್ತದೆ. ಉಪಹಾರ ಸಭೆಯ ದಿನ ನಾವಿಬ್ಬರು ಕಾಕತಾಳೀಯವಾಗಿ ಒಂದೇ ಕಂಪೆನಿಯ ವಾಚ್ ಧರಿಸಿದ್ದೇವೆ ಎಂದು ಆನಂತರ ತಿಳಿಯಿತು ಎಂದರು.

.


Share

You cannot copy content of this page