ಸಮಗ್ರ ಸುದ್ದಿ

ನವದೆಹಲಿಯಲ್ಲಿ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಿದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ

Share

ನವದೆಹಲಿ:ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿರುವ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ತೆರಳಿದ ಅವರು, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಈವೆರೆಗೂ ತಮಗೆ ನೀಡಿದ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಬಳಿಕ, ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ನಂತರ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರ ಜೊತೆಗೂ ಕೆಲ ಹೊತ್ತು ಮಾತುಕತೆ ನಡೆಸಿದರು.


Share

You cannot copy content of this page