ಸಮಗ್ರ ಸುದ್ದಿ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ

Share

ಬೆಂಗಳೂರು:ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆ ಆಗಿರುವ ಡಿ ಕೆ ಶಿವಕುಮಾರ್ ಅವರು ಜೂನ್ 3 ರಂದು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲೋಕಭವನದಲ್ಲಿ ಅಂದು ಸಂಜೆ 4.05 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಡಿ ಕೆ ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಲ್ ಪಿ ನೂತನ ನಾಯಕರಾಗಿ ಆಯ್ಕೆಯಾದ ಡಿ ಕೆ ಶಿವಕುಮಾರ್ ಅವರು ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ಶಿವಕುಮಾರ್ ಹಾಗೂ ಅವರ ಸಂಪುಟದ ಸಂಭವನೀಯ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಪತ್ರ ನೀಡಿದ್ದಾರೆ.


Share

You cannot copy content of this page