ಬೆಂಗಳೂರು:ಮುಖ್ಯಮಂತ್ರಿಯಾಗಿ ನಾಳೆ ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಲೋಕಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರೊಂದಿಗೆ ಮೊದಲ ಹಂತದಲ್ಲಿ ಹತ್ತು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿದ್ದು, ಲೋಕಭವನದ ಬಳಿ ಬಿಗಿಭದ್ರತೆ ಏರ್ಪಡಿಸಲಾಗಿದೆ. ಯಾವುದೇ ಆಡಂಬರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
