ಸಮಗ್ರ ಸುದ್ದಿ

ಇಂದು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ: ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Share

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಹಾಗೆಯೇ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪಮೇಶ್ವರ್ ಅವರೂ ಧನ್ಯವಾದ ಅರ್ಪಿಸಿದರು.

ಸಿದ್ದರಾಮಯ್ಯ ಅವರು ಇಬ್ಬರಿಗೂ ಅಭಿನಂದಿಸಿ ಶುಭಕೋರಿದರು.

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದು ಇಬ್ಬರಿಗೂ ಅಭಿನಂದಿಸಿದರು.


Share

You cannot copy content of this page