ಸಮಗ್ರ ಸುದ್ದಿ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

Share

​ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ. ಕೆ. ಹರಿಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

​ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಜೂನ್ 03, 2026 ರಂದು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಬಿ.ಕೆ.ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಚುಕ್ಕಾಣಿ ನೀಡಲಾಗಿದೆ.

ಇದುವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಡಿ. ಕೆ. ಶಿವಕುಮಾರ್ ಅವರ ಸ್ಥಾನಕ್ಕೆ ಈ ಹೊಸ ನೇಮಕಾತಿ ನಡೆದಿದೆ.
ನಿಕಟಪೂರ್ವ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಪಕ್ಷಕ್ಕೆ ನೀಡಿದ ಕೊಡುಗೆ ಮತ್ತು ಸೇವೆಯನ್ನು ಕಾಂಗ್ರೆಸ್ ಹೈಕಮಾಂಡ್ ಮುಕ್ತಕಂಠದಿಂದ ಶ್ಲಾಘಿಸಿದೆ.

ಎಐಸಿಸಿ ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಬಿ. ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ನಿರ್ಗಮಿತ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

​ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಈ ಬದಲಾವಣೆ ಯಾವ ರೀತಿಯ ರಾಜಕೀಯ ಸಂಚಲನ ಮೂಡಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.


Share

You cannot copy content of this page