ಸಮಗ್ರ ಸುದ್ದಿ

ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು  ಅರ್ಜಿ ಆಹ್ವಾನ

Share


ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ  ವತಿಯಿಂದ  ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಂಘಗಳು ಹಾಗೂ  ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪ್ರದೇಶವಾದ ಗುಂಜೂರು,  ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಒಟ್ಟು 1346 ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.

ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ  ಡಿಸೆಂಬರ್ 12 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ


Share

You cannot copy content of this page