ನವದೆಹಲಿ:2026ರ ರಾಜ್ಯಸಭೆಯ ದ್ವೈವಾರ್ಷಿಕ ಮತ್ತು ಉಪಚುನಾವಣೆಗಳಿಗೆ (Biennial/Bye-Elections) ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಇಂದು ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಈ ಕೆಳಕಂಡ ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಮುದ್ರೆ ಒತ್ತಿದ್ದಾರೆ ಎಂದು AICC ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಜೂನ್ 4, 2026 ರಂದು ಹೊರಡಿಸಿದ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯವಾರು ಅಭ್ಯರ್ಥಿಗಳ ಪಟ್ಟಿ:
ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮನ್ಸೂರ್ ಅಲಿ ಖಾನ್ ಸ್ಪರ್ಧಿಸುತ್ತಿದ್ದಾರೆ.
ಮಧ್ಯಪ್ರದೇಶದಿಂದ ಕುಮಾರಿ ಮೀನಾಕ್ಷಿ ನಟರಾಜನ್,
ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ, ಜಾರ್ಖಂಡ್ ನಿಂದ ಪ್ರಣವ್ ಝಾ ಅವರು ಸ್ಪರ್ಧೆಸುತ್ತಿದ್ದಾರೆ.
ಕರ್ನಾಟಕದಿಂದ ಮೂವರು ಪ್ರಮುಖ ನಾಯಕರು ಕಣಕ್ಕಿಳಿಯುತ್ತಿದ್ದು, ಸ್ವತಃ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಕ್ಷದ ಪ್ರಮುಖ ವಕ್ತಾರರಾದ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಅವರು ರಾಜ್ಯಸಭೆಯ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ಪಟ್ಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
