ಬೆಂಗಳೂರು: ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ ಗಿಡಗಳನ್ನು ಬೆಳೆಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ಅವರು ಇಂದು ವಿಧಾನಸೌಧದಲ್ಲಿ ವಿಶ್ವ ಪರಿಸರದ ದಿನದ ಅಂಗವಾಗಿ ಗಿಡ ನೆಟ್ಟು ನೀರುಣಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಶ್ವ ಪರಿಸರದ ದಿನದ ಅಂಗವಾಗಿ ಇಂದು ವಿಮಾನ ನಿಲ್ದಾಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಕೂಡಾ ಸಸಿ ನೆಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ
ಜೂನ್ 27 ರಂದು ಕೆಂಪೇಗೌಡ ದಿನಾಚರಣೆಯನ್ನು ಬಿಡಿಎ ವತಿಯಿಂದ ಆಚರಿಸುತ್ತಿದ್ದು, 15 ಲಕ್ಷ ಸಸಿ ನೆಡಲಾಗುವುದು ಎಂದರು.
