ಸಮಗ್ರ ಸುದ್ದಿ

ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ನಿಧನಕ್ಕೆ ಡಾ. ಶರಣಪ್ರಕಾಶ ಪಾಟೀಲ್‌ ಸಂತಾಪ

Share

ಬೆಂಗಳೂರು: ಎಐಸಿಸಿ ಕಾರ್ಯದರ್ಶಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿದ್ದ ಸೂರಜ್‌ ಹೆಗ್ಡೆ ಅವರ ಹಠಾತ್‌ ನಿಧನಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಪ್ರಕಟಿಸಿರುವ ಸಚಿವರು, ಸೂರಜ್‌ ಹೆಗ್ಡೆ ನಿಧನರಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಅತಿ ಚಿಕ್ಕ ವಯಸ್ಸಿನಲ್ಲಿ ಈ ರೀತಿಯ ದುರಂತಕ್ಕೆ ಒಳಗಾಗಿದ್ದು ನಿಜಕ್ಕೂ ಬೇಸರ ತರಿಸಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ದೇವರಾಜ ಅರಸು ಅವರು ಮೊಮ್ಮಗ ಸೂರಜ್‌ ಹೆಗ್ಡೆ, ತಾತನಂತೆಯೇ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.

ಅತ್ಯಂತ ಸಕ್ರಿಯ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದ ಸೂರಜ್‌ ಹೆಗ್ಡೆ, ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು, ಪುದುಚೇರಿ ಉಸ್ತುವಾರಿಯಾಗಿ ಸಂಘಟನೆಯಲ್ಲಿಯೂ ಅತ್ಯುತ್ತಮವಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅವರ ನಿಧನದಿಂದ ಪಕ್ಷವು ಒಬ್ಬ ಸಮರ್ಥ ಕಾರ್ಯಕರ್ತನನ್ನು ಕಳೆದುಕೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ಸೂರಜ್‌ ಹೆಗ್ಡೆ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


Share

You cannot copy content of this page