ಬೆಂಗಳೂರು:”ಸೂರಜ್ ಹೆಗ್ಡೆ ಅವರ ಅಗಲಿಕೆ ಆಘಾತ ತಂದಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರಕ್ಕೆ ಶಿವಕುಮಾರ್ ಅವರು ಸೋಮವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು.
“ಸೂರಜ್ ಹೆಗ್ಡೆ ಅವರು ತಮಿಳುನಾಡು ಚುನಾವಣೆ ಸಮಯದಲ್ಲಿ ಆಘಾತ ಎದುರಿಸಿದರೂ ನಂತರ ಅವರು ಚೇತರಿಸಿಕೊಂಡಿದ್ದರು. ರಾಹುಲ್ ಗಾಂಧಿ ಅವರ ಭೇಟಿಗೆ ಇಂದು ಸಮಯ ನಿಗದಿಯಾಗಿತ್ತು. ಅಷ್ಟರಲ್ಲಿ ಈ ರೀತಿ ಆಗಿದೆ” ಎಂದರು.
“ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಸೂರಜ್ ಹೆಗ್ಡೆ ಅವರ ಕುಟುಂಬದ ಜೊತೆ ಮಾತನಾಡಿದ್ದು, ಅವರಿಗೆ ಶಕ್ತಿ ತುಂಬುವ ಪ್ರಯತ್ನ ಮಾಡಿದ್ದಾರೆ. ನಮ್ಮಿಂದ ಸಾಧ್ಯವಾದಷ್ಟು ನಾವು ಶಕ್ತಿ ತುಂಬುತ್ತೇವೆ. ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದ ಹಾಗೂ ನಾಯಕರುಗಳನ್ನು ತಯಾರು ಮಾಡುವ ಪ್ರಯೋಗ ಶಾಲೆಯಾಗಿದ್ದ ದೇವರಾಜ ಅರಸು ಅವರ ಕುಡಿಗಳಲ್ಲಿ ಇವರು ಮಾತ್ರ ರಾಜಕೀಯದಲ್ಲಿದ್ದರು. ನಾವು ಅವರನ್ನು ಕಳೆದುಕೊಂಡಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂತಾಪ ಸೂಚಿಸಿದರು.
