ಸಮಗ್ರ ಸುದ್ದಿ

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ | ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ

Share

ಬೆಂಗಳೂರು: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.


Share

You cannot copy content of this page