ಸಮಗ್ರ ಸುದ್ದಿ

ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ – ಇ-ಖಾತಾ ಸೇವೆ ಮತ್ತಷ್ಟು ಸುಲಭ: 5 ವಾರಗಳಲ್ಲಿ 5,351 ಅರ್ಜಿಗಳ ವಿಲೇವಾರಿ, ಬಾಕಿ ಅರ್ಜಿಗಳ ಇತ್ಯರ್ಥಕ್ಕೆ ವೇಗ

Share

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯಡಿ ಆರಂಭಿಸಿರುವ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು, ಕಳೆದ 5 ವಾರಗಳಲ್ಲಿ 5,351 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 50 ಸ್ಥಳಗಳಲ್ಲಿ ನಡೆದ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರು ಭೇಟಿ ನೀಡಿ ಇ-ಖಾತಾ ಸಂಬಂಧಿತ ಸೇವೆಗಳ ಪ್ರಯೋಜನ ಪಡೆಯುತ್ತಿದ್ದಾರೆ.

ಈ ಅಭಿಯಾನದ ಮೂಲಕ ನಾಗರಿಕರಿಗೆ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳ ಮತ್ತು ಸುಲಭಗೊಳಿಸಲಾಗಿದ್ದು, ಖಾತಾ ಸಂಬಂಧಿತ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದೆ. ಶಿಬಿರಗಳಲ್ಲಿ ಅರ್ಜಿಗಳ ಪರಿಶೀಲನೆ, ದಾಖಲೆಗಳ ತಪಾಸಣೆ, ತಾಂತ್ರಿಕ ದೋಷಗಳ ನಿವಾರಣೆ, ಮಾಹಿತಿ ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ನೀಡುತ್ತಿದ್ದಾರೆ.

5 ವಾರಗಳಲ್ಲಿ 12,629 ಮಂದಿ ಅಭಿಯಾನ ಸ್ಥಳಗಳಿಗೆ ಭೇಟಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ರಾಜ್ಯ ಸರ್ಕಾರದ *6ನೇ ಗ್ಯಾರಂಟಿ *“ಭೂ ಗ್ಯಾರಂಟಿ” ಯೋಜನೆಯಡಿ* ಆರಂಭಿಸಿರುವ “ನನ್ನ ಇ-ಖಾತಾ ನನ್ನ ಹಕ್ಕು” ಅಭಿಯಾನದಲ್ಲಿ 5 ವಾರಗಳಲ್ಲಿ 12,629 ಮಂದಿ ಭೇಟಿ ನೀಡಿದ್ದಾರೆ. ಈ ಪೈಕಿ 5,351 ಅರ್ಜಿಗಳ ವಿಲೇವಾರಿ ಮಾಡಲಾಗಿದೆ.

ಇಂದು ನಡೆದ ನನ್ನ ಇ-ಖಾತಾ ನನ್ನ ಹಕ್ಕು ಅಭಿಯಾನಕ್ಕೆ ಇ-ಖಾತಾ, ಮ್ಯುಟೆಷನ್, ತಿದ್ದುಪಡಿ, ಹೊಸ ಇ-ಖಾತಾ, ಬಿ ಟು ಎ ಖಾತಾ ಹಾಗೂ ದೂರುಗಳ ಅರ್ಜಿಗಳು ಸೇರಿದಂತೆ ಇತರೆ ವಿಷಯಗಳಿಗಾಗಿ 1,399 ಮಂದಿ ಭೇಟಿ ನೀಡಿದ್ದು, ಈ ಪೈಕಿ ಸ್ಥಳದಲ್ಲಿಯೇ 922 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ


Share

You cannot copy content of this page