ಸಮಗ್ರ ಸುದ್ದಿ

ಧರೆಗುರುಳಿದ ಮರಗಳ ತೆರವು ಕಾರ್ಯ ಚುರುಕುಗೊಳಿಸಿ: ಜಗದೀಶ್.ಜಿ

Share

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆ-ಗಾಳಿಗೆ ಧರೆಗುರುಳುವ ಮರ ಹಾಗೂ ರೆಂಬೆ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಬೆಂಗಳೂರು ನಗರವು ಜನನಿಬಿಡ ಹಾಗೂ ಹೆಚ್ಚಾಗಿ ವಾಹನ ಓಡಾಡುವುದರಿಂದ ಮರಗಳು ರಸ್ತೆಗೆ ಬಿದ್ದಲ್ಲಿ ಕ್ಷಣಾರ್ಧದಲ್ಲಿ ಸಂಚಾರದಟ್ಟಣೆ ಉಂಟಾಗುವ ಹಿನ್ನೆಲೆಯಲ್ಲಿ ಈ ಕಾರ್ಯವನ್ನು ಚುರುಕುಗೊಳಿಸಿ, ತೆರವುಗೊಳಿಸುವ ತಂಡವು ತುರ್ತಾಗಿ ಸ್ಥಳಕ್ಕೆ ಆಗಮಿಸಿ ಮರಗಳನ್ನು ತೆರವುಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅದೇ ರೀತಿಯಲ್ಲಿ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆಗಳಲ್ಲಿ ಉದ್ಯಾನವನಗಳು, ಸಾರ್ವಜನಿಕ ಸ್ಥಳಗಳು, ಆಟದ ಮೈದಾನಗಳು, ಇನ್ನಿತರ ಸ್ಥಳಗಲ್ಲಿ ಅಪಾಯಕಾರಿ ಹಾಗೂ ಒಣಗಿದ ಮರ ಮತ್ತು ರೆಂಬೆ ಕೊಂಬೆಗಳನ್ನು ವಿಭಾಗವಾರು ಗುರುತಿಸಿ ಪಟ್ಟಿ ಮಾಡಿ ಮುನ್ನೆಚ್ಚರಿಕಾ ಕ್ರಮವಾಗಿ ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.


Share

You cannot copy content of this page