ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಜಿದ್ದಾಜಿದ್ದಿನ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್‌ನ ಐವರು ಮತ್ತು ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಆದರೆ, ಕೇವಲ 14 ಮತಗಳನ್ನು ಪಡೆಯಲಷ್ಟೇ ಶಕ್ತರಾದ ಜೆಡಿಎಸ್ ಅಭ್ಯರ್ಥಿ ಗೋವಿಂದ ರಾಜು ಅವರು ಪರಾಭವಗೊಂಡಿದ್ದಾರೆ.
ಒಟ್ಟು 222 ಶಾಸಕರು ಈ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದು, ಇದರಲ್ಲಿ ಒಂದು ಮತ ಅಸಿಂಧುವಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಮತದಾನದ ವಿವರ:
ವಿನಯ್ ಕಾರ್ತಿಕ್: 32 ಮತಗಳು (ಅತಿ ಹೆಚ್ಚು),
ಬಿ.ಕೆ. ಹರಿಪ್ರಸಾದ್: 30 ಮತಗಳು, ಬಿ.ಎಸ್. ಶಿವಣ್ಣ: 30 ಮತಗಳು, ತಿಪ್ಪಣ್ಣಪ್ಪ ಕಮಕನೂರ್: 30 ಮತಗಳು, ಪಿ.ವಿ. ಮೋಹನ್: 29 ಮತಗಳನ್ನು ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಮತದಾನದ ವಿವರ:
ರಘು ಕೌಟಿಲ್ಯ: 29 ಮತಗಳು, ಲಿಂಗರಾಜ ಪಾಟೀಲ್: 27 ಮತಗಳನ್ನು ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷವು ತನ್ನ ಎಲ್ಲಾ ಐದೂ ಸ್ಥಾನಗಳನ್ನು ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ ತನ್ನ ಪಾಲಿನ ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಕನಿಷ್ಠ ಮತಗಳನ್ನು ಪಡೆಯಲು ವಿಫಲವಾಗಿದೆ.
