ಬೆಂಗಳೂರು:ಆಯುಷ್ ಇಲಾಖೆಯ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಮುಂಜಾನೆ 6:00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದೆ.
ಈ ವಿಶೇಷ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಯೋಗ ಪಟುಗಳು ಯೋಗ ವಿದ್ಯಾರ್ಥಿಗಳು ಮತ್ತು ಯೋಗ ಶಿಕ್ಷಕರು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಯೋಗಾಸನದಲ್ಲಿ ಆಸಕ್ತಿಯುಳ್ಳ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಾಗತಿಕ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕಾಗಿ ಆಯುಷ್ ಇಲಾಖೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ತಿಕ್ ಮೊಬೈಲ್ ಸಂಖ್ಯೆ 9845986119 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರಿನ ಶ್ರೀ ಜಯಚಾಮರಾಜೇಂದ್ರ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
