ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.
ಸರ್ಕಾರದ ಆದೇಶದ ಮೇರೆಗೆ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಕೆಪಿಟಿಸಿಎಲ್ (KPTCL) ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಜವಾಬ್ದಾರಿಗಳ ಜೊತೆಗೆ, ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಸಮವರ್ತಿ ಪ್ರಭಾರದಲ್ಲಿ (Concurrent charge) ಕಾರ್ಯನಿರ್ವಹಿಸಲಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
