ಉಡುಪಿ:ನಾಡಿನ ಪ್ರಸಿದ್ಧ ಶಕ್ತಿಪೀಠ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ದೇವಸ್ಥಾನದ ಭಕ್ತಾಧಿಗಳ ವಸತಿ ಗೃಹ ಮತ್ತು ಅನ್ನದಾಸೋಹ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು, ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರಿಗೆ ದರ್ಶನ, ಪಾರ್ಕಿಂಗ್, ವಸತಿ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ನಿಡುವ ನಿಟ್ಟಿನಲ್ಲಿ ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದ್ದು, ಮುಂದೆ ಅದನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಒತ್ತುವರಿಯಾಗಿರುವ ಆಸ್ತಿಗಳನ್ನು ತೆರವುಗೊಳಿಸಲು ಮುಜರಾಯಿ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
