ಸಮಗ್ರ ಸುದ್ದಿ

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Share

ಬೆಂಗಳೂರು: ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಿನ್ನೆ ಬೆಂಗಳೂರಿಗೆ ‌ಆಗಮಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿಂದು ಆತ್ಮೀಯವಾಗಿ ಬೀಳ್ಕೊಟ್ಟರು

ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಜೂನ್ 27 ರಂದು ಬೆಂಗಳೂರು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ನಾಡಪ್ರಭು ಕೆಂಪೇಗೌಡ ಅವರ 517ನೇ ಜಯಂತಿ ಕಾರ್ಯಕ್ರಮ, ರಾಜಭವನದಲ್ಲಿ ನಶಾಮುಕ್ತ‌ ಭಾರತ ಕಾರ್ಯಕ್ರಮದ ಸಲುವಾಗಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಇಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಮತ್ತು ನಶಾ ಮುಕ್ತ ಭಾರತ್ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಯುಸೇನೆಯ ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ.ಖಾದರ್ ಫರೀದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ‌ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು. ಪಿ.ಎಸ್ ಸೇರಿದಂತೆ ಗಣ್ಯರು ‌ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page