ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (ಎಸ್ ಟಿಪಿ) ಯಾವುದೇ ರೀತಿಯ ಅವಘಡಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಲ್ಲದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ ಬಿ) ಅಧ್ಯಕ್ಷರಾದ ಡಾ.ಎನ್.ಮಂಜುಳ ಹೇಳಿದರು.
ಕಾವೇರಿ ಭವನದಲ್ಲಿ ಜಲಮಂಡಳಿ ವತಿಯಿಂದ ನಡೆದ ಆರೋಗ್ಯ ಮತ್ತು ಸುರಕ್ಷತೆ ಕುರಿತಂತೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೌಕರರು ಸುರಕ್ಷತೆಗೆ ಆದ್ಯತೆ ನೀಡಬೇಕು. ನಿಮ್ಮ ಕಾರ್ಯ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನಯ ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ನೌಕರರ ಸುರಕ್ಷತೆ ದೃಷ್ಟಿಯಿಂದ ಈ ಕಾರ್ಯಗಾರ ಹಮ್ಮಿಕೊಂಡಿದ್ದು, ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಚರ್ಚೆ ನಡೆಸಲಾಗುವುದು. ಅಲ್ಲದೆ, ಮುಕ್ತವಾಗಿ ಎಲ್ಲರೂ ಚರ್ಚೆ ಮಾಡಬೇಕು, ಯಾವುದೇ ತೊಂದರೆ, ಸಮಸ್ಯೆಗಳಿದ್ದರೆ ಚರ್ಚೆ ಮೂಲಕ ವ್ಯಾಪ್ತಿಯ ಅಲ್ಲಿ ಹರಿಸಿಕೊಳ್ಳಬೇಕು ಎಂದು ಡಾ.ಎನ್.ಮಂಜುಳ ಹೇಳಿದರು.
ಈ ವೇಳೆ ಜಲಮಂಡಳಿಯ ಮುಖ್ಯ ಇಂಜಿನಿಯರ್ ಗಳು, ಎಸ್ ಟಿಪಿ ವಿಭಾಗದ ನೌಕರರು ಉಪಸ್ಥಿತರಿದ್ದರು.
