ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | ಅತ್ಮಿಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Share

ಬೆಂಗಳೂರು: ಭಾರತದ ‌ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಷ್ಟ್ರಪತಿ ಅವರನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಏರ್ ವೈಸ್ ಮಾರ್ಷಲ್ ಡಿ.ಎಸ್. ಡಂಗಿ, ಮೇಜರ್ ಜನರಲ್ ಮೋಹಿತ್ ಮಹೇಂದ್ರೂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page