ಸಮಗ್ರ ಸುದ್ದಿ

ಹಾಸನ ತುಮಕೂರಿನಲ್ಲಿ ಅಕ್ರಮ ಅಕ್ರಮ ಬೀಜ ದಾಸ್ತಾನು ಜಪ್ತಿ

Share

ಬೆಂಗಳೂರು:ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ.

ಹಾಸನ ಜಿಲ್ಲೆ ಸಾಲಗಾಮೆ ಹೋಬಳಿಯ ಕೊಂಡಜ್ಜಿ ಕೊಪ್ಪಲುವಿನ ಕಾರ್ತಿಕ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ 1966 ಉಲ್ಲಂಘಿಸಿ ಅನುಮತಿ ಇಲ್ಲದೇ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ.ಮೌಲ್ಯದ 180 ಕೆ.ಜಿ.ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ವಶಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 86 ಸಾವಿರ ರೂ.ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ವಶಪಡಿಸಿಕೊಳ್ಳಲಾಗಿದೆ.

ಬೀಜ, ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡು ಬಂದರೆ ಕೃಷಿ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.


Share

You cannot copy content of this page