ಸಮಗ್ರ ಸುದ್ದಿ

ರಾಷ್ಟ್ರಪತಿಗಳಿಗೆ ಗವರ್ನರ್, ಸಿಎಂ ಬೀಳ್ಕೊಡುಗೆ

Share

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಬೆಂಗಳೂರಿಗೆ ಆಗಮಿಸಿದ್ದರು. ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣಿಸಿದರು.

ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಏರ್ ವೈಸ್ ಮಾರ್ಷಲ್ ಡಿ.ಎಸ್. ಡಂಗಿ, ಮೇಜರ್ ಜನರಲ್ ಮೋಹಿತ್ ಮಹೇಂದ್ರೂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page