ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ ಜಲಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್) 216+54 (ಸೇವಾನಿರತ ಅಭ್ಯರ್ಥಿಗಳು) ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ಜುಲೈ 3 ರಂದು ಆಯೋಗದ ವೆಬ್‍ಸೈಟ್ http://kpsc.kar.nic.in/Lists ನಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಮಾಹಿತಿ ಹಾಗೂ ಫಲಿತಾಂಶಕ್ಕಾಗಿ ಆಯೋಗದ ಅಧಿಕೃತ ವೆಬ್‍ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
