ಶಿಕ್ಷಣ / ಉದ್ಯೋಗ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೇರ ನೇಮಕಾತಿ: ದಾಖಲಾತಿಗಳ ಪರಿಶೀಲನೆ

Share

ಬೆಂಗಳೂರು: ಬೆಂಗಳೂರು ಜಲ ಮಂಡಳಿ ನೇರ ನೇಮಕಾತಿ ಅಧಿಸೂಚನೆ ಸಂಖ್ಯೆ:-ಇಡಿ/ಕೆಇಎ/ಆಡಳಿತ/ಸಿ.ಆರ್.25/2025 (ಆರ್.ಪಿ.ಸಿ) ದಿನಾಂಕ:-15-11-2025 ರನ್ವಯ ವಿವಿಧ ವೃಂದದ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಪಟ್ಟಿಯನ್ನು ಸಿದ್ಧಪಡಿಸಿ, ಅಂತಹ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಿದ್ದ ಪ್ರಕಟಣೆಯಲ್ಲಿನ ಕಿರಿಯ ಸಹಾಯಕ-ಮಿಕ್ಕುಳಿದ (ಆರ್.ಪಿ.ಸಿ) ವೃಂದದ ಹುದ್ದೆಗಳನ್ನು ತಾಂತ್ರಿಕ ಕಾರಣಗಳಿಂದ ಹಿಂಪಡೆದು ಪರಿಷ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಮಂಡಳಿಯು ಪ್ರಕಟಿಸಿರುತ್ತದೆ.

ಅರ್ಹ ಅಭ್ಯರ್ಥಿಗಳು ತಮಗೆ ನಿಗಧಿಪಡಿಸಿರುವ ದಿನದಂದು ಪೂರಕ ದಾಖಲೆಗಳೊಂದಿಗೆ ಹಾಜರಾಗಲು ಕೋರಿದೆ. ದಾಖಲೆ ಪರಿಶೀಲನೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ, ದಿನಾಂಕ, ಸಮಯ, ಸ್ಥಳ ಮತ್ತಿತರ ಮಾಹಿತಿಗೆ ಮಂಡಳಿಯ ಅಧಿಕೃತ ವೆಬ್ ಸೈಟ್ www.bwssb.gov.in ನಲ್ಲಿ ವೀಕ್ಷಿಸಬಹುದಾಗಿದೆ.


Share

You cannot copy content of this page