ಬೆಂಗಳೂರು : ಇಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಗೆಲುವು ಸಾಧಿಸುವ ಮೂಲಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್, ಖಜಾಂಜಿ ಸ್ಥಾನಕ್ಕೆ ಮಧುಕರ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ.
20 ಸುತ್ತುಗಳ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕೆ.ಎನ್. ಶಾಂತಕುಮಾರ್ 558 ಮತಗಳನ್ನು ಪಡೆದಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ 749 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.
