ಬೆಂಗಳೂರು :ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ದಾಖಲಾತಿಗಾಗಿ ನಡೆಸಲಾಗುವ ‘ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ-2027’ ಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಸಲು 31 ಜುಲೈ ಕೊನೆಯ ದಿನಾಂಕವಾಗಿದೆ. ಪ್ರವೇಶ ಪರೀಕ್ಷೆ 2026 ನವೆಂಬರ್ 28 ರಂದು ನಡೆಯಲಿದೆ.
2026-27ನೇ ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಕಡ್ಡಾಯ ನಿವಾಸಿಯಾಗಿರಬೇಕು.
ಬೆಂಗಳೂರು ನಗರ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ಲಭ್ಯವಿರುವ ಒಟ್ಟು ಸೀಟುಗಳಲ್ಲಿ 50% ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ 50% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್‍ಸೈಟ್ www.navodaya.gov.in ಗೆ ಭೇಟಿ ನೀಡಬಹುದು. ಕಚೇರಿಯ ದೂರವಾಣಿ ಸಂಖ್ಯೆಗಳಾದ 9844478098, 7624831601, 080-29900456 ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
