ಬೆಂಗಳೂರು: ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಲ್)ನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಪಿ. ರುದ್ರಪ್ಪಯ್ಯ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಪಿಸಿಕೆಎಲ್ ನ ನಿರ್ಗಮಿತ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಕೆ. ವೆಂಕಟೇಶ್ ಅವರು ರುದ್ರಪ್ಪಯ್ಯ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ರುದ್ರಪ್ಪಯ್ಯ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ಮುಂಬರುವ ತಿಂಗಳುಗಳಲ್ಲಿ ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳ ಕುರಿತು ಚರ್ಚಿಸಿದರು.
