ಸಮಗ್ರ ಸುದ್ದಿ

ನಾಳೆ ಕೆಪಿಸಿಎಲ್ ಸಂಸ್ಥಾಪನಾ ದಿನಾಚಣೆ

Share

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ವಿದ್ಯುತ್ ಉತ್ಪಾದನಾ ಸಂಸ್ಥೆಯಾಗಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ 57ನೇ ಸಂಸ್ಥಾಪನಾ ದಿನಾಚರಣೆ ಸೋಮವಾರ (ನಾಳೆ) ನಡೆಯಲಿದೆ.

ಅರಮನೆ ರಸ್ತೆಯಲ್ಲಿರುವ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಸಂಜೆ 5.30ಕ್ಕೆ ನಡೆಯಲಿರುವ ಸಂಸ್ಥಾಪನಾ ದಿನಾಚರಣೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸುವರು. ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಪಿ. ಪಾಲ್ಗೊಳ್ಳುವರು.

ಸಂಸ್ಥಾಪನಾ ದಿನದ ಅಂಗವಾಗಿ ನಿಗಮದಲ್ಲಿ 25 ವರ್ಷ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿ, ಸಿಬ್ಬಂದಿಯನ್ನು ನೆನಪಿನ ಕಾಣಿಕೆಗಳೊಂದಿಗೆ ಅಭಿನಂದಿಸಲಾಗುತ್ತದೆ. ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ನಿಗಮದ ಸಿಬ್ಬಂದಿಯ ಮಕ್ಕಳಿಗೆ ಚಿನ್ನದ ನಾಣ್ಯ ಮತ್ತು ಪ್ರಮಾಣಪತ್ರಗಳನ್ನು ನೀಡಿ ಪುರಸ್ಕರಿಸಲಾಗುತ್ತದೆ.


Share

You cannot copy content of this page