ಸಮಗ್ರ ಸುದ್ದಿ

ಎಂಎಸ್ಐಎಲ್: ಶೀಘ್ರ ನೇಮಕಾತಿ ಮುಗಿಸಲು ಎಂ ಬಿ ಪಾಟೀಲ ಸೂಚನೆ

Share

ಬೆಂಗಳೂರು: ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಸಂಸ್ಥೆಯಲ್ಲಿ ಪ್ರಗತಿಯಲ್ಲಿರುವ 62 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರವಾಗಿ ಮುಗಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ನಿರ್ದೇಶಿಸಿದ್ದಾರೆ.

ಈ ಸಂಬಂಧ ಅವರು ಸೋಮವಾರದಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜಕುಮಾರ್ ಮತ್ತು ಇತರ ಅಧಿಕಾರಿಗಳೊಂದಿಗೆ ಪರಾಮರ್ಶನಾ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ನೇಮಕ ಮಾಡಿಕೊಳ್ಳುತ್ತಿರುವ ಹುದ್ದೆಗಳಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೇಲ್ಸ್ ಮ್ಯಾನೇಜರ್ ಮುಂತಾದ ಹುದ್ದೆಗಳಿವೆ. ನೇಮಕಾತಿಯ ಭಾಗವಾಗಿ ಕೆಇಎ ಈಗಾಗಲೇ ಪರೀಕ್ಷೆ ನಡೆಸಿ, ಮೆರಿಟ್ ಪಟ್ಟಿ ಕೊಟ್ಟಿದೆ. ಇದಕ್ಕೆ ಅನುಸಾರವಾಗಿ ನೇಮಕ ಪ್ರಕ್ರಿಯೆ ತ್ವರಿತವಾಗಿ ಮುಗಿಸಬೇಕು ಎಂದು ಹೇಳಿದ್ದಾರೆ.

ಎಲ್ಲಾ ಹುದ್ದೆಗಳನ್ನೂ ಮೆರಿಟ್ ಆಧಾರದಲ್ಲೇ, ಸರಕಾರದ ನಿಯಮಗಳಿಗೆ ಅನುಸಾರವಾಗಿ ತುಂಬಬೇಕು. ಹುದ್ದೆಗೆ ಅರ್ಹರು ಬಾರದಿದ್ದರೆ ಮೆರಿಟ್ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ಅಭ್ಯರ್ಥಿಗಳಿಗೆ ಅವಕಾಶ ಕೊಡಬೇಕು. ಇದರಲ್ಲಿ ಯಾರದೋ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು ಎಂದು ಸೂಚನೆ ನೀಡಿದ್ದೇನೆ ಎಂದು ಪಾಟೀಲ ತಿಳಿಸಿದ್ದಾರೆ.


Share

You cannot copy content of this page