ಬೆಳಗಾವಿ, ಸುವರ್ಣಸೌಧ: ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.
ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
