ಬೆಂಗಳೂರು:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಪದವೀಧರ ಯುವಕ-ಯುವತಿಯರು ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಸ್ವಂತ ಉದ್ಯಮ ಪ್ರಾರಂಭಿಸಲು ಸಮಾಜ ಕಲ್ಯಾಣ ಇಲಾಖೆಯು ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಮಹಾನಗರ ವ್ಯಾಪ್ತಿಯಲ್ಲಿ ಈ ಮಾಧ್ಯಮ ಘಟಕಗಳನ್ನು ಸ್ಥಾಪಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಯೋಜನಾ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಠ 5.00 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2026
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಲಗತ್ತಿಸಿ, ಜುಲೈ 31, 2026 ರೊಳಗಾಗಿ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಆನೇಕಲ್ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕರ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
