ಬೆಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಅಗಸ್ಟ್ 31 ರವರೆಗೆ ವಿಸ್ತರಿಸಿದೆ.
2025-26 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಜುಲೈ 31 ಕೊನೆಯ ದಿನವಾಗಿತ್ತು. ಈಗ ಅವಧಿಯನ್ನು ಅಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ಎಂ.ಎನ್.ಅನುಚೇತ್ ಪ್ರಕಟಣೆಯಲ್ಲಿ ಕೋರಿದ್ದಾರೆ.
