ಸಮಗ್ರ ಸುದ್ದಿ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ – ಪಾರದರ್ಶಕತೆಗೆ ಆದ್ಯತೆ;ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧನೆ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್

Share

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ, ಈ ಬಾರಿಯ ಪರೀಕ್ಷಾ ಆಯೋಜನೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಸಂಪೂರ್ಣ ಪಟ್ಟಿಯನ್ನು ಈಗಾಗಲೇ ಅಭ್ಯರ್ಥಿಗಳ ಹಾಲ್ ಟಿಕೆಟ್ ನಲ್ಲಿ ವಿವರವಾಗಿ ನೀಡಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಿಲು ಕೋರಿದೆ.

ಧಾರ್ಮಿಕ ಉಡುಪು ಧರಿಸಿ ಪರೀಕ್ಷೆ ಬರೆಯಲು ಅಪೇಕ್ಷಿಸುವವರು, ಪರೀಕ್ಷೆ ಆರಂಭಕ್ಕೆ2:30 ಗಂಟೆ ಮೊದಲು ಕೇಂದ್ರದಲ್ಲಿ ಹಾಜರಿದ್ದು ತಪಾಸಣೆಗೆ ಒಳಪಟ್ಟು ಪರೀಕ್ಷೆ ಬರಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ಗೊಂದಲಕ್ಕೆ ಒಳಗಾಗದೇ, ಆತ್ಮವಿಶ್ವಾಸದಿಂದ ಉದ್ಯೋಗಾಕಾಂಕ್ಷಿಗಳು ಯಶಸ್ವಿಯಾಗಿ ಪರೀಕ್ಷೆಯನ್ನು ಎದುರಿಸುವಂತೆ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.


Share

You cannot copy content of this page