ಸಮಗ್ರ ಸುದ್ದಿ

ವಿಧಾನ ಪರಿಷತ್ ಸದಸ್ಯೆಯಾಗಿ ಎ.ವಿ. ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ

Share

ಬೆಂಗಳೂರು:ವಿಧಾನ ಪರಿಷತ್ ನೂತನ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ವಿಧಾನ ಪರಿಷತ್ ಸದಸ್ಯರಾದ ಎಸ್ ರವಿ, ಐವನ್ ಡಿ’ಸೋಜಾ, ಹೆಚ್.ಪಿ. ಸುಧಾಮದಾಸ್ ಮತ್ತಿತರರು ಉಪಸ್ಥಿತರಿದ್ದರು.


Share

You cannot copy content of this page