ಸಮಗ್ರ ಸುದ್ದಿ

ನಾಳೆಯಿಂದ ವಿಧಾನಮಂಡಲ ಅಧಿವೇಶನ

Share

ಬೆಂಗಳೂರು: ನಾಳೆಯಿಂದ 10 ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಂಗಾಮಿ ವಿಧಾನಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅಧಿವೇಶನದ ಮೊದಲ ದಿನವಾದ ನಾಳೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲು ನಿರ್ಧರಿಸಲಾಗಿದೆ. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.

ಈ ಬಾರಿ ರಾಜ್ಯದಲ್ಲಿನ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ, ಬಿಡದಿ ಟೌನ್‌ಶಿಪ್, ಸಚಿವ ಬಿ.ನಾಗೇಂದ್ರ ರಾಜೀನಾಮೆ ಕುರಿತ ವಿಷಯಗಳನ್ನು ಸದನದಲ್ಲಿ ಪ್ರಮುಖವಾಗಿ ಚರ್ಚಿಸಲು ಬಿಜೆಪಿ ನಿರ್ಧರಿಸಿದೆ.

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ನಡೆಯುವ ಮೊದಲ ಅಧಿವೇಶನ ಇದಾಗಿದೆ.


Share

You cannot copy content of this page