ಸಮಗ್ರ ಸುದ್ದಿ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ

Share

ಬೆಂಗಳೂರು: ರಾಜ್ಯ ಸರ್ಕಾರ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಗಳ ಉತ್ಪಾದನೆ, ಶೇಖರಣೆ, ವಿತರಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿ ಆದೇಶ ಹೊರಡಿಸಿದೆ.

ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಆಗಸ್ಟ್ ೧೦ರಂದು ಆದೇಶ ಹೊರಡಿಸಲಾಗಿದ್ದು, ಅಂದಿನಿಂದಲೇ ನಿಷೇಧ ಜಾರಿಗೆ ಬಂದಿದೆ ಎಂದು ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಪ್ಯಾಕೇಟ್, ಸ್ಯಾಷೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಗಳನ್ನು ರಾಜ್ಯಾದ್ಯಂತ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ನಿಷೇಧಿತ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ ಅಥವಾ ಮಾರಾಟ ಕಂಡುಬಂದರೆ ಮಾಹಿತಿ ನೀಡುವಂತೆ ಇಲಾಖೆ ಆಯುಕ್ತರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.


Share

You cannot copy content of this page