ಸಮಗ್ರ ಸುದ್ದಿ

ವಿಧಾನಸಭಾಧ್ಯಕ್ಷ, ಮೇಲ್ಮನೆ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ; ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Share

ಬೆಂಗಳೂರು: ವಿಧಾನಮಂಡಲದ ಎರಡು ಪ್ರಮುಖ ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಸಭಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ, ಜಿ.ಎಸ್.ಪಾಟೀಲ್ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ, ಸಲೀಂ ಅಹ್ಮದ್ ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಇತರೆ ಸಚಿವರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಉಭಯ ಸದನಗಳಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತವನ್ನು ಹೊಂದಿದ್ದು, ಬಹುತೇಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಈ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಅನುಮಾನವಾಗಿದೆ.
ಒಂದು ವೇಳೆ ಪ್ರತಿಪಕ್ಷಗಳು ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸದಿದ್ದರೆ, ಆಡಳಿತಪಕ್ಷದ ನಾಯಕರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.


Share

You cannot copy content of this page