ಬೆಂಗಳೂರು:2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಪ್ರಶಸ್ತಿ”ಗಳನ್ನು ಘೋಷಿಸಲಾಗಿದ್ದು, ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಇಬ್ಬರು ಅಧಿಕಾರಿಗಳು ಈ ಬಾರಿಯ ‘ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಶ್ಲಾಘನೀಯ ಸೇವಾ ಪದಕ’ಕ್ಕೆ ಭಾಜನರಾಗಿದ್ದಾರೆ.
ತಮ್ಮ ಸುದೀರ್ಘ ಹಾಗೂ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ಆರ್.ಎ. ಮುಂಡ್ಕೂರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ (ತರಬೇತಿ) ಹೆಚ್. ಎಂ. ಶಿವಕುಮಾರಸ್ವಾಮಿ ಮತ್ತು ಬೆಂಗಳೂರಿನ ವಿಧಾನಸೌಧ ಅಗ್ನಿನಿಯಂತ್ರಣ ಘಟಕದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಎಂ. ಬಸವರಾಜು ಅವರು ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವಕ್ಕೆ ಭಾಜನರಾಗಿದ್ದಾರೆ.
