ಸಮಗ್ರ ಸುದ್ದಿ

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆ: ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ರಚನೆಗೆ ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ

Share

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನಗಳನ್ನು ನೀಡುತ್ತೇವೆಂದು ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ 30×40 ಅಡಿ ಅಳತೆಯ ಹಾಗೂ ನಗರ ಪ್ರದೇಶಗಳಲ್ಲಿ 20×30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಿ ಅರ್ಹರಿಗೆ ಒದಗಿಸಲಾಗುವುದು.

ಈ ನಿಟ್ಟಿನಲ್ಲಿ ಲಭ್ಯವಿರುವ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸಿ, ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದೆ ನೀಡದೆ ತುರ್ತಾಗಿ ಕೈಗೊಳ್ಳುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ನಾವು ಕೊಟ್ಟ ಮಾತಿಗೆ ಬದ್ಧರಾಗಿ, ಪ್ರಣಾಳಿಕೆಯ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು ನುಡಿದಂತೆ ನಡೆಯುತ್ತಿದ್ದೇವೆ. ಸರ್ವರಿಗೂ ಸ್ವಂತ ಸೂರಿನ ಭಾಗ್ಯವನ್ನು ನೀಡಿ, ಎಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ನಮ್ಮ ಆಶಯ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.


Share

You cannot copy content of this page