ಬೆಂಗಳೂರು:‘ನಮ್ಮೂರ ಹೆಮ್ಮೆ’ ಸಾಧಕ ವಿದ್ಯಾರ್ಥಿಗಳಿಗೆ ಪೌರ ಸನ್ಮಾನ ಕಾರ್ಯಕ್ರಮದ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 26, 2026ರವರೆಗೆ ವಿಸ್ತರಿಸಲಾಗಿದೆ.
ಪ್ರತಿಭಾವಂತ ಯುವಕರು ನಮ್ಮೂರ ಹೆಮ್ಮೆ ಹಾಗೂ ಸಮಾಜದ ಆಸ್ತಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಹಾಗೂ ಬೆಂಗಳೂರು ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರಿನಲ್ಲಿ ನೆಲೆಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ 621 ಅಥವಾ ಅದಕ್ಕಿಂತ ಹೆಚ್ಚು ಅಂಕ, ಪಿಯುಸಿಯಲ್ಲಿ 596 ಅಥವಾ ಅದಕ್ಕಿಂತ ಹೆಚ್ಚು ಅಂಕ ಹಾಗೂ ಸೆಂಟ್ರಲ್ ಸಿಲಬಸ್‌ನ 10ನೇ ಮತ್ತು 12ನೇ ತರಗತಿಯಲ್ಲಿ 496 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಅರ್ಹರಾಗಿರುತ್ತಾರೆ.
ಜಿಬಿಎ ನೀಡಿರುವ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ಸಂಬಂಧಪಟ್ಟ ಶಾಲೆ/ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಣ ಪಡೆದು, ವಿದ್ಯಾರ್ಥಿಗಳು ಅಥವಾ ಪೋಷಕರು ಆಗಸ್ಟ್ 26, 2026ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರು (ಶಿಕ್ಷಣ), ಜಿಬಿಎ ಕೇಂದ್ರ ಕಚೇರಿ, ಎನ್.ಆರ್. ಚೌಕ, ಬೆಂಗಳೂರು-02, ಅನೆಕ್ಸ್-3, 3ನೇ ಕಟ್ಟಡ, 3ನೇ ಮಹಡಿ ಇಲ್ಲಿ ಖುದ್ದಾಗಿ ಅಥವಾ greaterbengaluruauth@gmail.com ಇ-ಮೇಲ್ ಮೂಲಕ ಸಲ್ಲಿಸಬಹುದು. ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ ಕಾರ್ಯಕ್ರಮವನ್ನು ಆಗಸ್ಟ್ 29, 2026ರಂದು ಆಯೋಜಿಸಲಾಗಿದೆ.
ಜಿಬಿಎ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಲಭ್ಯ:
ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಕೆಳಗಿನ ಲಿಂಕ್ ಅಥವಾ ಕ್ಯೂಆರ್ ಕೋಡ್ ಮೂಲಕ ಡೌನ್‌ಲೋಡ್ ಮಾಡಿಕೊಂಡು, ನಿಯಮಾನುಸಾರ ಅರ್ಜಿ ಸಲ್ಲಿಸಬಹುದಾಗಿದೆ:
