ಬೆಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಕುರಿತಂತೆ ಶೀಘ್ರದಲ್ಲೇ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್ ಸೇರಿದಂತೆ ೮ ಪ್ರಮುಖ ಕ್ಲಬ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ನಡೆಸಲಾಗಿದ್ದು, ನೈರ್ಮಲ್ಯವಿಲ್ಲದ ಕ್ಲಬ್‌ಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.
ತಪಾಸಣೆಯ ಸಮಯದಲ್ಲಿ ಅಧಿಕಾರಿಗಳು ಕುಡಿಯುವ ನೀರು ಮತ್ತು ಅಡಿಗೆ ಎಣ್ಣೆಯ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಮಾದರಿಗಳನ್ನು ವಿಶ್ಲೇಷಣೆಗಾಗಿ ಸರ್ಕಾರಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
