ಸಮಗ್ರ ಸುದ್ದಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ |ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ,ಸುವರ್ಣಸೌಧ, ಮೈಸೂರು ಅರಮನೆ!

Share

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ.

ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ,ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ(ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.
 
ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ(PINK) ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ.

ಇದುವರೆಗೂ ಸದರಿ ಯೋಜನೆ ಅಡಿ 1.20ಕೋಟಿ ಫಲನುಭವಿಗಳ ಖಾತೆಗೆ 76500ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ.


Share

You cannot copy content of this page