ಸಮಗ್ರ ಸುದ್ದಿ

ಇಸ್ಕಾನ್ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಶಾಸಕ ಕೆ. ಗೋಪಾಲಯ್ಯ ಹಾಗೂ ಪ್ರಮುಖ ಗಣ್ಯರ ಭೇಟಿ

Share

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನ ಪ್ರಸಿದ್ಧ ಇಸ್ಕಾನ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಅತ್ಯಂತ ವಿಜೃಂಭಣೆ ಹಾಗೂ ಶ್ರದ್ಧಾ-ಭಕ್ತಿಗಳಿಂದ ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ದೇಶ-ವಿದೇಶಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ ಭಗವಂತನ ದರ್ಶನ ಪಡೆದರು.

ಇಸ್ಕಾನ್‌ ಸಂಸ್ಥೆಯ ಉಪಾಧ್ಯಕ್ಷರಾದ ನವೀನ ನೀರದ ದಾಸ ಹಾಗೂ ಮಾಧವ ಹರಿದಾಸರವರು ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, “ಶ್ರೀಕೃಷ್ಣ ಜನ್ಮಾಷ್ಟಮಿಯ ಈ ಪವಿತ್ರ ದಿನದಂದು ದೇವಸ್ಥಾನಕ್ಕೆ ಆಗಮಿಸುವ ಪ್ರತಿಯೊಬ್ಬ ಭಕ್ತರಿಗೂ ಭಗವಂತನ ಕೃಪೆ ಲಭಿಸಲಿ. ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ, ಸರ್ವರಿಗೂ ಆರೋಗ್ಯ, ಆಯುಷ್ಯ ಹಾಗೂ ಶಾಂತಿ-ನೆಮ್ಮದಿ ಸಿಗಲಿ,” ಎಂದು ಶುಭ ಹಾರೈಸಿದರು.

ಈ ವಿಶೇಷ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ವೆಂಕಟೇಶ್ ಮೂರ್ತಿ, ಎನ್. ವೆಂಕಟೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.


Share

You cannot copy content of this page