ಸಮಗ್ರ ಸುದ್ದಿ

ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ, ಅಭಿಪ್ರಾಯ ಸಂಗ್ರಹಿಸಿ ಕ್ರಮ–ಕಂದಾಯ ಸಚಿವ ಕೃಷ್ಣ ಭೈರೇಗೌಡ

Share

ಬೆಳಗಾವಿ ಸುವರ್ಣ ವಿಧಾನಸೌಧ :ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ವಿಧಾನಸಭೆಯಲ್ಲಿಂದು ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರ ಸರ್ಕಾರದ ಗಮನ ಸೆಳೆಯವ ಸೂಚನೆಗೆ ಉತ್ತರಿಸಿದ ಸಚಿವರು ದೊಡ್ಡ ಜಿಲ್ಲೆಗಳನ್ನು ಆಡಳಿತಾತ್ಮಕವಾಗಿ ನಿರ್ವಹಣೆ ಮಾಡುವುದು ಕಷ್ಟ. ಇದರಿಂದಾಗಿ ಜನಪರ ಆಡಳಿತ ಕೊಡುವುದು ಕಷ್ಟಸಾಧ್ಯವೆಂಬುದು ಸರ್ಕಾರದ ಗಮನಕ್ಕೆ ಬಂದಿದೆ.

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಎರಡು ಅಥವಾ ಮೂರು ನೂತನ ಜಿಲ್ಲೆಯನ್ನು ರಚಿಸಬೇಕೆಂಬ ಮನವಿಗಳು ಬಂದಿವೆ. ಇದನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದು, ಅಭಿಪ್ರಾಯ ಸಂಗ್ರಹಣೆ ಪ್ರಕ್ರಿಯೆ ಆಗಬೇಕಿದೆ. ಸಮಯಾವಕಾಶ ನೋಡಿಕೊಂಡು ಎಲ್ಲರ ಅಭಿಪ್ರಾಯ ಪಡೆದು ಮುಖ್ಯಮಂತ್ರಿಗಳೊಂದಿಗೂ ಈ ಬಗ್ಗೆ ಚರ್ಚಿಸಿ ಕಾರ್ಯರೂಪಕ್ಕೆ ತರುವ ಕೆಲಸ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ಶಶಿಕಲಾ ಜೊಲ್ಲೆ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ನೂತನ ಜಿಲ್ಲೆ ರಚನೆ ಅಗತ್ಯತೆ ಬಗ್ಗೆ ಸರ್ಕಾರದ ಗಮನ ಸೆಳೆದರು.


Share

You cannot copy content of this page