ಕಲಬುರ್ಗಿ: ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಪವಿತ್ರವಾದ ಸ್ವಾತಂತ್ರ್ಯ ನಮಗೆ ಸಿಕ್ಕ ಮೇಲೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಇದು ಶುಭ ಸಂದರ್ಭ. ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ದಾಖಲೆಯುತ ಕೊಡುಗೆ ನೀಡಿದೆ. ನಾನು ಯಾರನ್ನೂ ಟೀಕೆ ಮಾಡುವುದಿಲ್ಲ ಎಂದರು.
ಜನರು ಖರ್ಗೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು
ಅತಿ ಹೆಚ್ಚು ವೈದ್ಯಕೀಯ, ಎಂಜಿನಿಯರಿಂಗ್ ಸೀಟು ಸೇರಿದಂತೆ ಹಲವಾರು ಅವಕಾಶಗಳನ್ನು 371 ಜೆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದ್ದಾರೆ. ಈ ಭಾಗದ ಜನರು ತಮ್ಮ ಮನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರ ಇಟ್ಟು ಪೂಜಿಸಬೇಕು” ಎಂದು ಹೇಳಿದರು.
ಜನರ ಸಂತಸವೇ ಕಾಂಗ್ರೆಸ್ ಗುರಿ
ಜನರು ಸಂತಸದಿಂದ ಇರುವಂತೆ ಮಾಡುವುದೇ ಕಾಂಗ್ರೆಸ್ ಸರ್ಕಾರದ ಗುರಿ. ಇಂತಹ ಭವ್ಯ ಕಾರ್ಯಕ್ರಮ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಕ್ಷಿ ಗುಡ್ಡೆ. ಈ ಯೋಜನೆಗೆ ಸಹಕರಿಸಿದವರಿಗೆ ಹಾಗೂ ಕಾರ್ಯಕ್ರಮ ಆಯೋಜಿಸಿದ ಜಿಲ್ಲಾಡಳಿತವು ಅಭಿನಂದನೀಯ ಎಂದರು.
