ಸಮಗ್ರ ಸುದ್ದಿ

ರಾಜ್ಯ ಸರ್ಕಾರ ಬರ ಪರಿಸ್ಥಿತಿ ಗಂಭೀರವಾಗಿ ಪರಿಗಣಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

Share

ಹಾವೇರಿ: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಬರದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.ನಾನು ಇದನ್ನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಇಡೀ ರಾಜ್ಯವು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳು ಬರಗಾಲದಿಂದ ತತ್ತರಿಸುತ್ತಿವೆ. ಕುಡಿಯುವ ನೀರು ಬೆಳೆ ಹಾನಿಗೆ ಪರಿಹಾರ ನೀಡಲು ಯಾವುದೇ ಯೋಜನೆ ರೂಪಿಸಿಲ್ಲ. ರೈತರಿಗೆ ಯಾವುದೇ ಪರಿಹಾರ ಸಿಗುತ್ತಿಲ್ಲ. ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್ ನಲ್ಲಿ ಹಣ ಇದ್ದರೂ, ರಾಜ್ಯ ಸರ್ಕಾರ ಪರಿಹಾರ ನೀಡದೇ ಕೇಂದ್ರದ ಎನ್ ಡಿ ಆರ್ ಎಫ್ ನಿಧಿಗೆ ಕಾಯುತ್ತಿದೆ. ವಿವಿಧೆಡೆ ಸಚಿವ ಸಂಪುಟ ಸಭೆಗಳ ಹೆಸರಿನಲ್ಲಿ ಕೇವಲ ಪ್ರದರ್ಶನ ನಡೆಯುತ್ತಿದೆ. ಇದು ಖಂಡನೀಯ ಎಂದು ಹೇಳಿದರು.


Share

You cannot copy content of this page